ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KIMS Hubballi Teaching Jobs 2024

Click to Share

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KIMS Hubballi Teaching Jobs 2024

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ವತಿಯಿಂದ ಖಾಲಿ ಇರುವ ಬ್ಯಾಕ್ ಲಾಗ್  ಹುದ್ದೆಗಳ ನೇರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಪ್ರೊಫೆಸರ್ & ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 10-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಉಪನ್ಯಾಸಕ ಮತ್ತು ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರೊಫೆಸರ್ 01
ಅಸಿಸ್ಟೆಂಟ್ ಪ್ರೊಫೆಸರ್ 04
ಒಟ್ಟು ಹುದ್ದೆಗಳು 05 ಹುದ್ದೆಗಳು

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಎಂಬಿಬಿಎಸ್ ಪದವಿ & ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ರೂ. 1500/-

ಅರ್ಜಿ ಶುಲ್ಕವನ್ನು Director, KIMS, Hubballi ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 55 ವರ್ಷವನ್ನು ಮೀರಿರಬಾರದು. 

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 10.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/-

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

Application Form

Official Website


Click to Share
Bookmark the permalink.

About edutechkannada.com

www.edutechkannada.com Educator

One Response to ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KIMS Hubballi Teaching Jobs 2024

  1. Pingback: ಜಿಲ್ಲಾ ನ್ಯಾಯಾಲಯ ಹಾವೇರಿಯಲ್ಲಿ  ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: Dis

Leave a Reply

Your email address will not be published. Required fields are marked *