ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900/- KMEA Recruitment 2024
ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರ & ಸಾಂಖ್ಯಿಕ ಇಲಾಖೆಯ ವತಿಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಸಂಶೋಧನಾ ಅಭ್ಯರ್ಥಿಗಳಾಗಿ ಕಾರ್ಯನಿರ್ವಹಿಸಲು ಇಚ್ಛೆ ಇರುವ ಅಭ್ಯರ್ಥಿಗಳಿಂದ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ (KARTET) ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರ
ಹುದ್ದೆಗಳ ಹೆಸರು: ಸಂಶೋಧನಾ ಅಭ್ಯರ್ಥಿಗಳು
ಹುದ್ದೆಗಳ ಸಂಖ್ಯೆ: 07 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 47900/- ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪಿಎಚ್ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024
Important Links/ ಪ್ರಮುಖ ಲಿಂಕುಗಳು:
Pingback: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Jobs 2024 - EduTech Kannada
Pingback: ಕರ್ನಾಟಕದ ಸೈನಿಕ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800