ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಎ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:  KMIO Karnataka Recruitment 2023

Click to Share

ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಎ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:  KMIO Karnataka Recruitment 2023

ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಗ್ರೂಪ್ ಎ ಸಹಾಯಕ ಪ್ರಾಧ್ಯಾಪಕ  ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 29-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ಪ್ರಾಧ್ಯಾಪಕ (ಬಯೋಕೆಮಿಸ್ಟ್ರಿ) 01 ಹುದ್ದೆ

ವೇತನ ಶ್ರೇಣಿ:

ರೂ. 79800-211500

AICTE ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು PhD/ NET/ KSET ಅರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅಧಿಸೂಚನೆಯಲ್ಲಿ ತಿಳಿಸಲಾಗಿರುವ   ಅರ್ಜಿ ಶುಲ್ಕ ಪಾವತಿಸಬೇಕು

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 29.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

SBI ನಲ್ಲಿ ಖಾಲಿ ಇರುವ 5468 ಸರ್ಕಲ್ ಬೇಸಡ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form

Website


Click to Share

1 thought on “ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಎ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:  KMIO Karnataka Recruitment 2023”

  1. Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Chitradurga

Leave a Comment

Your email address will not be published. Required fields are marked *

Scroll to Top