ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ ದಿಂದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ : KMMD Karnataka Application for Various Schemes

Click to Share

KMMD: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ ದಿಂದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ : KMMD Karnataka Application for Various Schemes

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/11/2023. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ)

SCHOLARSHIP : ಪ್ರೌಢಶಾಲೆಯಿಂದ ಸ್ನಾತಕೋತ್ತರ ವರೆಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ. 35000/-  ಪ್ರೊತ್ಸಾಹ ಧನ| KLWB Scholarship 2023

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:

  1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  1. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಸಕಇ/225/ಬಿಸಿಎ/2000 ದಿನಾಂಕ:30/03/2002ರನ್ವಯ ಮಡಿವಾಳ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು.
  1. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
  1. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
  1. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
  1. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
  1. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50/-ಲಕ್ಷಗಳು.
  1. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.
  1. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.
  1. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/-ಗಳ ಮಿತಿಯೊಳಗಿರಬೇಕು. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಯೋಜನೆಯಲ್ಲಿ ಅರ್ಜಿ ಸಲ್ಲಿಸುವವರ ವಾರ್ಷಿಕ ವರಮಾನವು ರೂ. 8.00/ಲಕ್ಷಗಳ ಮಿತಿಯಲ್ಲಿರಬೇಕು.
  1. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇl% ಮೀಸಲಾತಿ ಇರಿಸಿದೆ.

ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಲ್ಯಾಪ್‌ಟ್ಯಾಪ್ ಯೋಜನೆ ಜಾರಿ| Free Laptap Scheme for Students

ರಾಜ್ಯ ಸರ್ಕಾರದ ನಿಗಮದ ಯೋಜನೆಗಳ ವಿವರ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು: 

1) ಸ್ವಯಂ ಉದ್ಯೋಗ ನೇರಸಾಲ ಯೋಜನೆ 

2) ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು.

3) ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು) 

4) ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ 

5) ಸ್ವಾವಲಂಬಿ ಸಾರಥಿ ಯೋಜನೆ. 

6) ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ)

ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ: KSS College SDA Recruitment 2023

ಪ್ರಮುಖ ಸೂಚನೆಗಳು: 

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ /ಶ್ರೀಮತಿ /ಕುಮಾರಿ ಮುಂತಾದ ಮಾಹಿತಿಗಳು)

ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.

> ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್: www.kmmd.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ/ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಗಳಲ್ಲಿ ಪೂರ್ವಾಹ್ನ 10.00ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 03.11.2023 ಆಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

Download the Notice

 

 


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ ದಿಂದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ : KMMD Karnataka Application for Various Schemes

  1. Pingback: HAL ನಲ್ಲಿ ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: HAL Recruitment 2023 - edutechkannada.com

  2. Pingback: ಪರಿಶಿಷ್ಟ ಜಾತಿ & ಇತರೆ ವಿದ್ಯಾರ್ಥಿಗಳಿಗೆ ಪೂರ್ವ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: 26 ಲಕ್ಷ ವ

Leave a Reply

Your email address will not be published. Required fields are marked *