ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ALO ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 40000/- KPCL ALO Jobs 2024
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ದಲ್ಲಿ ಖಾಲಿ ಇರುವ 06 ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 19-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/-
Karnataka Power Corporation Limited (KPCL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)
ಹುದ್ದೆಗಳ ಹೆಸರು: ಸಹಾಯಕ ಕಾನೂನು ಅಧಿಕಾರಿ
ಹುದ್ದೆಗಳ ಸಂಖ್ಯೆ- 06
ಕೆಲಸದ ಸ್ಥಳ: ಬೆಂಗಳೂರು
ವೇತನ ಶ್ರೇಣಿ/ Salary Scale:
KPCL ನಿಯಮಾವಳಿಗಳನ್ವಯ ಮಾಸಿಕ ರೂ. 40000/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ ಶೇ 40% ಅಂಕಗಳೊಂದಿಗೆ ಕಾನೂನು ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು. ವಕೀಲಿ ವೃತ್ತಿಯಲ್ಲಿ 05 ವರ್ಷ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 40 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು KPCL ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 19-02-2024 ರ ಒಳಗಾಗಿ kpclcontractappt@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ:
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 19-01-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 19-02-2024
ಅಧಿಕೃತ ಲಿಂಕ್/ Official Links:
Pingback: ಅಂಚೆ ವಿಭಾಗದಲ್ಲಿ ಖಾಲಿ ಇರುವ ನೇರ ಪ್ರತಿನಿಧಿ & ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Postal Field Officer Recruitment
Pingback: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC
Pingback: ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Bengaluru Jobs