ಕೆಪಿಎಸ್ಸಿಯಿಂದ ಮತ್ತೊಂದು ನೇಮಕಾತಿ ಅಧಿಸೂಚನೆ ಪ್ರಕಟ: 112 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC CAG Recruitment 2024
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ಎ & ಬಿ ಹುದ್ದೆಗಳ ನೇಮಕಾತಿ ಕುರಿತಂತೆ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ 112 ಗ್ರೂಪ್ ಸಹಾಯಕ ನಿಯಂತ್ರಕರು ಮತ್ತು ಲೆಕ್ಕ ಪರಿಶೋಧಕರು ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 17-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು FDAA & AE ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು: ಸಹಾಯಕ ನಿಯಂತ್ರಕರು
ರಾಜ್ಯ ವೃಂದದ ಖಾಲಿ ಹುದ್ದೆಗಳ ಸಂಖ್ಯೆ: 43 |
ಸ್ಥಳೀಯ ವೃಂದ (HK) ಖಾಲಿ ಹುದ್ದೆಗಳ ಸಂಖ್ಯೆ: 15 |
ಒಟ್ಟು ಹುದ್ದೆಗಳು: 58 ಹುದ್ದೆಗಳು |
ಹುದ್ದೆಗಳ ಹೆಸರು: ಲೆಕ್ಕ ಪರಿಶೋಧನಾಧಿಕಾರಿ
ರಾಜ್ಯ ವೃಂದದ ಖಾಲಿ ಹುದ್ದೆಗಳ ಸಂಖ್ಯೆ: 54 |
ಸ್ಥಳೀಯ ವೃಂದ (HK) ಖಾಲಿ ಹುದ್ದೆಗಳ ಸಂಖ್ಯೆ: 00 |
ಒಟ್ಟು ಹುದ್ದೆಗಳು: 54 ಹುದ್ದೆಗಳು |
ವೇತನ/ Salary
ಹುದ್ದೆಯ ಹೆಸರು | ವೇತನ ಶ್ರೇಣಿ |
ಸಹಾಯಕ ನಿಯಂತ್ರಕರು | 52650-97100 |
ಲೆಕ್ಕ ಪರಿಶೋಧನಾಧಿಕಾರಿ | 43100-83900 |
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಬಿಎ (ಆರ್ಥಿಕ ವಿಶ್ಲೇಷಣೆ)/ ವಾಣಿಜ್ಯಶಾಸ್ತ್ರ ಅಥವಾ ಯುಜಿಸಿಯು ಆರ್ಥಿಕ ಎಂಬುದನ್ನು ಒಂದು ವಿಷಯವನ್ನಾಗಿ ಅಭ್ಯಸಿಸಿರುವ ಕುರಿತು ಅಧಿಸೂಚನೆ ಹೊರಡಿಸಿರುವ ಯಾವುದೇ ಇತರೆ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, UPI ಅಥವಾ ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.03.2024 ರಿಂದ 17.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-04-2024
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: KK & RPC
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 21 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ASRB Recruitment 2024 - EduTech Kannada