KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Apply now 2024
ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಶನರಿ ನೇಮಕಾತಿ ಕುರಿತಂತೆ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಗ್ರೂಪ್ ಎ & ಬಿ (ಗೆಜೆಟೆಡ್ ಪ್ರೊಬೇಶನರಿ) ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ
ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ವಿವರ/ Post Details:
ಗ್ರೂಪ್ ಎ ಖಾಲಿ ಹುದ್ದೆಗಳ ಸಂಖ್ಯೆ: 159 |
ಗ್ರೂಪ್ ಬಿ ಖಾಲಿ ಹುದ್ದೆಗಳ ಸಂಖ್ಯೆ: 255 |
ಒಟ್ಟು ಹುದ್ದೆಗಳು: 384 ಹುದ್ದೆಗಳು |
ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-
ವೇತನ/ Salary
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಲಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಪರೀಕ್ಷೆಯ ಪ್ರಯತ್ನಗಳು/ No. of Attempt:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ | 05 ಬಾರಿ |
ಪ್ರವರ್ಗ 1, 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ | 07 ಬಾರಿ |
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ | ಪ್ರಯತ್ನಗಳ ಮಿತಿ ಇರುವುದಿಲ್ಲ |
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, UPI ಅಥವಾ ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 38 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಹಂತ 1: ಸ್ಪರ್ಧಾತ್ಮಕ ಪರೀಕ್ಷೆ
ಹಂತ 2: ಮುಖ್ಯ ಪರೀಕ್ಷೆ
ಹಂತ 3: ಸಂದರ್ಶನ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 04.03.2024 ರಿಂದ 15.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2024
ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 07-07-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ