ನವೆಂಬರ್ 5 ರಂದು KPSC, ಕಾನ್ಸ್‌ಟೇಬಲ್ ಸೇರಿ ಮೂರು ಇಲಾಖೆಗಳ ಪರೀಕ್ಷೆ ಒಂದೇ ದಿನ!! ಮುಂದೂಡಲು ಖರ್ಗೆ ಮನವಿ KPSC KSP Exam Postpone Request
ಸ್ನೇಹಿತರೇ ನಮಸ್ತೆ, ಕರ್ನಾಟಕದ ಲೋಕ ಸೇವಾ ಆಯೋಗ & ಕರ್ನಾಟಕ ಪೋಲಿಸ್ ಇಲಾಖೆ ಸೇರಿ ಮೂರು ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಲು ದಿನಾಂಕ 05-11-2023 ರಂದು ಏಕಕಾಲದಲ್ಲಿ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆಗಾಗಿ ಓದುತ್ತಿರುವ ಅಭ್ಯರ್ಥಿಗಳಿಗೆ ಇದರಿಂದ ತೀವ್ರ ನಿರಾಸೆಯಾಗಿದ್ದು ಹುದ್ದೆ ಕೈ ತಪ್ಪುವ ಭೀತಿಯಲ್ಲಿದ್ದಾರೆ. ಸಾವಿರಾರು ಅಭ್ಯರ್ಥಿಗಳು ಯಾವುದಾದರೂ ಒಂದು ಪರೀಕ್ಷೆಗೆ ಮಾತ್ರ ಹಾಜರಾಗಿ ಇನ್ನುಳಿದ ಪರೀಕ್ಷೆಗಳಿಂದ ವಂಚಿತರಾಗಬೇಕಾಗುತ್ತದೆ. ಹಾಗಾಗಿ ನವೆಂಬರ್ 5 ರಂದು ಯಾವುದಾದರೂ ಒಂದು ಪರೀಕ್ಷೆಯನ್ನು ಮಾತ್ರ ನಡೆಸಿ ಇನ್ನುಳಿದ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅವರ ಪತ್ರದ ಸಾರಾಂಶ ಕೆಳಗಿನಂತಿದೆ
IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸರ್ಕಾರಿ ನೌಕರಿ ಸೇರಬೇಕೆಂದು ರಾಜ್ಯದ ಯುವಕ ಯುವತಿಯರು ಪ್ರತಿಯೊಂದು ನೇಮಕಾತಿಗೂ ಅರ್ಜಿ ಸಲ್ಲಿಸಿ, ವರ್ಷಗಟ್ಟಲೇ ತಯಾರಿ ನಡೆಸಿದ ಅಭ್ಯರ್ಥಿಗಳಿಗೆ ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸಿರುವುದರಿಂದ ಗೊಂದಲ ಉಂಟಾಗಿ, ಹಲವಾರು ಅಭ್ಯರ್ಥಿಗಳು ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗಧಿ ಮಾಡಲು ಕ್ರಮ ವಹಿಸುವಂತೆ ನನಗೆ ಮನವಿ ಸಲ್ಲಿಸಿರುತ್ತಾರೆ.
ಲೋಕಸೇವಾ ಆಯೋಗವು ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಹುದ್ದೆಗೆ 242, ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳು 47, ಮತ್ತು ರಾಜ್ಯ ಪೊಲೀಸ್ ಇಲಾಖೆಯು ಕೂಡ, ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೆಬಲ್ ಹುದ್ಯಗಳಿಗೆ ದಿನಾಂಕ 05/11/2023 ರ ಭಾನುವಾರದಂದು ಸ್ಪರ್ಧಾತ್ಮಕ ಪರೀಕ್ಷೆ ನಿಗಧಿಗೊಳಿಸಲಾಗಿದೆ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ನೇಮಕಾತಿ ಅಧಿಸೂಚನೆ: KHPT Recruitment 2023
ಆದರೆ ಕಳೆದ 05 ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೇ ಸಾವಿರಾರು ಅಭ್ಯರ್ಥಿಗಳು ವಿದ್ಯಾರ್ಹತೆಗೆ ಹಾಗೂ ವಯೋಮಿತಿಗೆ ತಕ್ಕಂತೆ ಸರಿಯಾಗಿ ಉದ್ಯೋಗ ಸಿಗದೇ ಈಗಾಗಲೇ ಅನ್ಯಾಯಕ್ಕೆ ಒಳಗಾಗಿದ್ದಾರೆ.
ಆದ್ಯರಿಂದ ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗದಿಂದ ನಿಗಧಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗಧಿ ಮಾಡಲು ಕೋರಲಾಗಿದೆ.
Pingback: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: APPOST Recruitment 2023 - edutechkannada.com