ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC Office Jobs 2023

Click to Share

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC Office Jobs 2023

ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಕಾನೂನು ಕೋಶದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. KPSC ಕಛೇರಿಯಲ್ಲಿ ಖಾಲಿ ಇರುವ ಕಾನೂನು ಕೋಶದ ಮುಖ್ಯಸ್ಥರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 30ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

SBI ನಲ್ಲಿ ಖಾಲಿ ಇರುವ 5468 ಸರ್ಕಲ್ ಬೇಸಡ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ- SVVS Recruitment 2023

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಕಾನೂನು ಕೋಶದ ,ಮುಖ್ಯಸ್ಥರು 01

ವೇತನ ಶ್ರೇಣಿ:

ಪ್ರತಿ ತಿಂಗಳು ರೂ. 1,15,000/- ವೇತನ ನೀಡಲಾಗುತ್ತದೆ. ಇದರ ಜೊತೆಗೆ ರೂ. 35000/- ವಾಹನ ಭತ್ಯೆ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವವುಳ್ಳ ನಿವೃತ್ತ ಜಿಲ್ಲಾ & ಸೆಷನ್ಸ್ ನ್ಯಾಯಾಧೀಶರು ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

01-11-2023 ಕ್ಕೆ ಸರಿಯಾಗಿ ಗರಿಷ್ಟ  65 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ನಗರ ಮೂಲಸೌಕರ್ಯ ನಿಗಮದಲ್ಲಿ NHK & HK ಹುದ್ದೆಗ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC Office Jobs 2023

  1. Pingback: ಕರ್ನಾಟಕ ಸಾರಿಗೆ ಇಲಾಖೆ ಸೇರಿ ವಿವಿಧ ಕಡೆ ಖಾಲಿ ಇರುವ 400 SDA, FDA ಹುದ್ದೆಗಳ ಭರ್ತಿಗೆ KEA ಯಿಂದ ನೇಮಕಾತಿ: KEA 400 Vacancies Notification -

  2. Pingback: SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ: SAIL Recruitment Notification 2023 - EduTech Kannada

Leave a Reply

Your email address will not be published. Required fields are marked *