ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 33863 ಹುದ್ದೆಗಳ ಭರ್ತಿಗೆ ಕೂಡಲೇ ಅರ್ಜಿ ಸಲ್ಲಿಸಿ| KSHPS Teacher Recruitment 2024
ಕರ್ನಾಟಕ ಶಿಕ್ಷಣ ಇಲಾಖೆಯಿಂದ ಬೃಹತ್ ಅತಿಥಿ ಶಿಕ್ಷಕರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆದುರಾಗಿ 33863 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 15-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 731 PGT ಶಿಕ್ಷಕರು & ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ: Post Details
ಸಂಸ್ಥೆ/ ಇಲಾಖೆ: ಸಾರ್ವಜನಿಕ ಶಿಕ್ಷಣ ಇಲಾಖೆ
ಹುದ್ದೆಗಳ ಹೆಸರು: ಪ್ರಾಥಮಿಕ ಶಾಲಾ ಅತಿಥಿ ಶಿಕ್ಚಕರು
ಹುದ್ದೆಗಳ ಸಂಖ್ಯೆ: 33863 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ
ವೇತನ ಶ್ರೇಣಿ / Salary:
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿಯಮಾವಳಿಗಳನ್ವಯ ತಿಂಗಳಿಗೆ ರೂ. 10500/- ವೇತನ ನೀಡಲಾಗುತ್ತದೆ
Qualification/ ಅರ್ಹತೆಗಳು:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ಪದವಿ & ಡಿಎಡ್ ಅಥವಾ ಬಿಎಡ್ ಮುಗಿಸಿರಬೇಕು
ವಯೋಮಿತಿ/ Age Limit:
ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Processing Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ/ Selection Procedure:
ಮುಖ್ಯ ಶಿಕ್ಷಕರುಗಳ ನೇತೃತ್ವದ ಆಯ್ಕೆ ಸಮಿತಿಯು ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ/ How to Apply :
ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಓದಬಹುದು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಹುದ್ದೆಗಳ ವಿವರವನ್ನು ಪಡೆದ ನೇರವಾಗಿ ಶಾಲೆಯ ಮುಖ್ಯಗುರುಗಳಿಗೆ ಬಯೋಡಾಟಾ & ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಕೂಡಲೇ ಸಲ್ಲಿಸಬೇಕು.
ಕರ್ನಾಟಕ ಜವಳಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| ವೇತನ ರೂ. 46000/-
ಅರ್ಜಿ ಸಲ್ಲಿಸುವ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 16-06-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HSTR Guest Jobs 2024 - EduTec
Pingback: ಈ ಸಂಸ್ಥೆಯಲ್ಲಿ ಖಾಲಿ ಇರುವ 255 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: ವೇತನ ರೂ. 56000/- ರಿಂದ ಆರಂ
Pingback: ಕೆಪಿಎಸ್ಸಿ ಯಿಂದ ಪದವಿ ಅಥವಾ ಡಿಪ್ಲೋಮಾ ಮುಗಿದವರಿಗೆ 426 ಹುದ್ದೆಗಳಿಗೆ ಅರ್ಜಿ ಆಹ್ವಾನ: KPSC 426 Grp C Rect. 2024 - EduTech Kannada