ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಶನ್ ಲಿಮಿಟೆಡ್ ನಿಂದ ಗ್ರೂಪ್ ಎ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 52650/- KSMCL Recruitment 2024
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಶನ್ ಲಿಮಿಟೆಡ್ (KSMCL) ನ ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳಾದ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 26-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕದ ವಸತಿ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/-
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಆಯುಷ್ ಇಲಾಖೆಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ವ್ಯವಸ್ಥಾಪಕ (ಉತ್ಪಾದನೆ) | 02 |
ವ್ಯವಸ್ಥಾಪಕ (ಮಾರ್ಕೆಟಿಂಗ್) | 01 |
ಒಟ್ಟು ಹುದ್ದೆಗಳು | 03 |
ವೇತನ ಶ್ರೇಣಿ:
ಮೂಲವೇತನ ರೂ. 52650-97100
(ಈ ವೇತನದ ಜೊತೆಗೆ ರಾಜ್ಯ ಸರ್ಕಾರದಿಂದ ನಿಗದಿಪಡಿಸಿದಂತೆ ತುಟ್ಟುಭತ್ಯೆ, ಮನೆ ಬಾಡಿಗೆ ಭತ್ಯೆ ಮತ್ತು ಇತರೆ ಸವಲತ್ತುಗಳು ದೊರೆಯುತ್ತವೆ)
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 250/-
ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗ: ರೂ. 500/-
ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬಹುದು
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 26.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-07-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅ