KSRTC ಯಲ್ಲಿ ಖಾಲಿ ಇರುವ 2000 ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಮರುಚಾಲನೆ: KSRTC Driver cum Conductor Recruitment 2024

Click to Share

KSRTC ಯಲ್ಲಿ ಖಾಲಿ ಇರುವ 2000 ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಮರುಚಾಲನೆ: KSRTC Driver cum Conductor Recruitment 2024

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತದಲ್ಲಿ ದಲ್ಲಿ ಖಾಲಿ ಇರುವ ಚಾಲಕ ಕಮ್ ನಿರ್ವಾಹಕ ಹುದ್ದೆಗಳ ಭರ್ತಿಗೆ ದಿನಾಂಕ: 14-02-2020 ರಂದು ಹೊರಡಿಸಲಾಗಿದ್ದ ನೇಮಕಾತಿ ಅಧಿಸೂಚನೆಯ ಅನುಸಾರ ಪ್ರಸ್ತುತ ದೇಹದಾರ್ಡ್ಯತೆ ನಡೆಸಲು ಪ್ರಕಟಣೆ ಹೊರಡಿಸಲಾಗಿದೆ. ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿಗಾಗಿ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿನ ಹುದ್ದೆಗಳ ಸಂಖ್ಯೆಯನ್ನು ಸರ್ಕಾರದ ಆದೇಶದಂತೆ 2000 ಕ್ಕೆ ಸೀಮಿತಗೊಳಿಸಿ ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಅದರಂತೆ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳನ್ವಯ ವರ್ಗವಾರು ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸಿ ನಿಗಮದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/-

ಮುಂದುವರೆದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ: 06-03-2024 ರಿಂದ ದಾಖಲಾತಿ/ದೇಹದಾರ್ಡ್ಯತೆ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಅಭ್ಯರ್ಥಿಗಳು ದಿನಾಂಕ: 03-03-2024 ರಿಂದ ನಿಗಮದ ಅಧಿಕೃತ ವೆಬ್‌ಸೈಟ್ ksrtcjobs.karnataka.gov.in ರಲ್ಲಿ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ ಸೂಚಿಸಲಾಗಿದೆ.

ಮಹಾನಗರಪಾಲಿಕೆಯಲ್ಲಿ ಖಾಲಿ ಇರುವ ALO ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 43000/- 

ವಿಶೇಷ ಸೂಚನೆ: ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲಾತಿ | ದೇಹದಾರ್ಡ್ಯತೆ ಪರಿಶೀಲನೆ ಮಾತ್ರ ನಡೆಸಲಾಗುತ್ತಿದೆ. ಅರ್ಹರಾದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ ನಡೆಸುವ ಕುರಿತು ಪ್ರತ್ಯೇಕ ದಿನಾಂಕ / ಸ್ಥಳವನ್ನು ನಿಗಧಿಪಡಿಸಲಾಗುವುದು. ಸದರಿ ಹುದ್ದೆಯ ಆಯ್ಕೆಯು ಗಣಕೀಕೃತ ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಹಾಗೂ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ನಡೆಯುವುದರಿಂದ ಮಾನವ ಹಸ್ತಕ್ಷೇಪ ಇರುವುದಿಲ್ಲ. ಆದುದರಿಂದ ಅಭ್ಯರ್ಥಿಗಳು ಯಾವುದೇ ಶಿಫಾರಸ್ಸು ಮಧ್ಯವರ್ತಿಗಳ ಅಮಿಷಗಳಿಗೆ ಒಳಗಾಗಬಾರದೆಂದು ಸ್ಪಷ್ಟಪಡಿಸಿದೆ.

ಕರಾರಸಾ ನಿಗಮದಲ್ಲಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2000 ಚಾಲಕ-ಕಂ-ನಿವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿರುತ್ತದೆ. ಈ ಕುರಿತಂತೆ ನಿರ್ದೇಶಕ ಮಂಡಳಿಯು ಅನುಮೋದನೆ ನೀಡಿದ್ದು, ಅದರಂತೆ ರೋಸ್ಟರ್ ಕಾರ್ಯಾಚರಣೆ ಮಾಡಿ ನಿಗಧಿಪಡಿಸಿರುವ ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ಅಭ್ಯರ್ಥಿಗಳ ವರ್ಗವಾರು ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅಧಿಕೃತ ಲಿಂಕುಗಳು/ Official Links:

Notification

Official Link

 


Click to Share
Bookmark the permalink.

About edutechkannada.com

www.edutechkannada.com Educator

2 Responses to KSRTC ಯಲ್ಲಿ ಖಾಲಿ ಇರುವ 2000 ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಮರುಚಾಲನೆ: KSRTC Driver cum Conductor Recruitment 2024

  1. Pingback: ಗೃಹ & ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Recruitment 202

  2. Pingback: ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Bengaluru Jobs 2024 - EduTech Kannada

Leave a Reply

Your email address will not be published. Required fields are marked *