ಕರ್ನಾಟಕ ರಾಜ್ಯ ರೇಷ್ಮೇ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSSRDI Recruitment 2024

Click to Share

ಕರ್ನಾಟಕ ರಾಜ್ಯ ರೇಷ್ಮೇ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSSRDI Recruitment 2024

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಹೈದರಾಬಾದ್ ಕರ್ನಾಟಕ 371 ಜೆ ವೃಂದದಲ್ಲಿ   ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ಹಿರಿಯ ಸಂಶೋಧನಾ ಸಹಾಯಕರು & ವಿಜ್ಞಾನಿ ಬಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-10-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹತ್ತನೇ ಅಥವಾ ಐಟಿಐ ಮುಗಿದವರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್-  3% ತುಟ್ಟಿಭತ್ಯೆ (DA) ಹೆಚ್ಚಳ: ಜುಲೈ 1, 2024 ರಿಂದ ಅರಿಯರ್ಸ್

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ವಿಜ್ಞಾನಿ ಬಿ 01
ಹಿರಿಯ ಸಂಶೋಧನಾ ಸಹಾಯಕರು 05
ದ್ವಿತೀಯ ದರ್ಜೆ ಸಹಾಯಕರು 01

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ ಶ್ರೇಣಿ
ವಿಜ್ಞಾನಿ ಬಿ 83700-155200
ಹಿರಿಯ ಸಂಶೋಧನಾ ಸಹಾಯಕರು 44425-83700
ದ್ವಿತೀಯ ದರ್ಜೆ ಸಹಾಯಕರು 34100-67600

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು:

ವಿಜ್ಞಾನಿ ಬಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ M.Sc First Class in Sericulture/ Zoology or MSc (Agri) Entomology and Doctoral Degree in Concerned subject ವಿದ್ಯಾರ್ಹತೆಯನ್ನು ಮುಗಿಸಿರಬೇಕು.

 ಹಿರಿಯ ಸಂಶೋಧನಾ ಸಹಾಯಕರು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ M.Sc  ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ದ್ವಿತೀಯ ದರ್ಜೆ ಸಹಾಯಕರು: ಪಿಯುಸಿದ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ  :

ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ: ರೂ. 500/- ಮಾತ್ರ

ಇತರೆ ಅಭ್ಯರ್ಥಿಗಳಿಗೆ: ರೂ. 1000/-

ಅರ್ಜಿ ಶುಲ್ಕವನ್ನು ಪೋಸ್ಟಲ್ ಆರ್ಡರ್ ಮೂಲಕ ನಿರ್ದೇಶಕರು, ಕರಾರೇಸಂಅಸಂಸ್ಥೆ ತಲಘಟ್ಟಪುರ ಇವರ ಹೆಸರಿಗೆ ಪಾವತಿಸಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 38 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 30.10.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ವಿಳಾಸ:

ನಿರ್ದೇಶಕರು, ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ

ತಲಘಟ್ಟಪುರ, ಕನಕಪುರ ರಸ್ತೆ, ಬೆಂಗಳೂರು-560109

ರಾಚವಿವಿ ಬೆಳಗಾವಿಯಲ್ಲಿ ಖಾಲಿ ಇರುವ 51 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 32000/ –

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-10-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form


Click to Share

Leave a Comment

Your email address will not be published. Required fields are marked *

Scroll to Top