ಕರ್ನಾಟಕ ವಿಶ್ವವಿದ್ಯಾಲಯ ಮಾಧ್ಯಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: KUD School Teacher Recruitment 2023

Click to Share

ಕರ್ನಾಟಕ ವಿಶ್ವವಿದ್ಯಾಲಯ ಮಾಧ್ಯಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: KUD School Teacher Recruitment 2023

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಅಡಿಯಲ್ಲಿ ಬರುವ ಮಾಧ್ಯಮಿಕ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಸಹಾಯಕ ಶಿಕ್ಷಕರು, ವಿಶೇಷ ಶಿಕ್ಷಕರು, & ಸಹಾಯಕ ಹೌಸ್ ಕೀಪರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 18-11-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

NTPC ಯಲ್ಲಿ ಖಾಲಿ ಇರುವ 495 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC India Recruitment 2023

ಕರ್ನಾಟಕ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಮಾಧ್ಯಮಿಕ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 

EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Jobs 2023

ಹುದ್ದೆಗಳ ವಿವರ:

ಮಾಧ್ಯಮಿಕ ಶಾಲೆ (5 ರಿಂದ 12ನೇ ತರಗತಿವರೆಗೆ)

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ಶಿಕ್ಷಕರು 09 ಹುದ್ದೆಗಳು
ಸಂಗೀತ ಶಿಕ್ಷಕ 01
ಸಹಾಯಕ ಹೌಸ್ ಮಾಸ್ಟರ್ ಕಂ ಸಹಾಯಕ ಶಿಕ್ಷಕ 01
ಸಹಾಯಕ ಹೌಸ್ ಮಾಸ್ಟರ್ 01

ಪ್ರಾಥಮಿಕ ಕನ್ನಡ ಶಾಲೆ:

ಸಹಾಯಕ ಶಿಕ್ಷಕರು 02

ವೇತನ ಶ್ರೇಣಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ಶಿಕ್ಷಕರು 33450-62600
ಸಂಗೀತ ಶಿಕ್ಷಕ 27650-52650
ಸಹಾಯಕ ಹೌಸ್ ಮಾಸ್ಟರ್ ಕಂ ಸಹಾಯಕ ಶಿಕ್ಷಕ 33450-62600
ಸಹಾಯಕ ಹೌಸ್ ಮಾಸ್ಟರ್ 30350-58250
ಸಹಾಯಕ ಶಿಕ್ಷಕರು (ಪ್ರಾಥಮಿಕ ಶಾಲೆ) 25000-51400

 

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು:

ಸಹಾಯಕ ಶಿಕ್ಷಕರು:

ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ (SC, ST, Cat 1 & PWD ಅಭ್ಯರ್ಥಿಗಳಿಗೆ 45%) ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಬಿಎಡ್ ಮುಗಿಸಿರಬೇಕು. KARTET ಪರೀಕ್ಷೆಯನ್ನು ಉತ್ತೀರ್ಣಗೊಳಿಸಿರಬೇಕು.

ಸಂಗೀತ ಶಿಕ್ಷಕರು:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಗೀತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಸಹಾಯಕ ಹೌಸ್ ಮಾಸ್ಟರ್ ಕಮ್ ಸಹಾಯಕ ಶಿಕ್ಷಕರು:

ಕಲಾ ನಿಕಾಯ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ (SC, ST, Cat 1 & PWD ಅಭ್ಯರ್ಥಿಗಳಿಗೆ 45%) ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಸಹಾಯಕ ಹೌಸ್ ಮಾಸ್ಟರ್:

ವಿಜ್ಞಾನ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ (SC, ST, Cat 1 & PWD ಅಭ್ಯರ್ಥಿಗಳಿಗೆ 45%) ಸ್ನಾತಕಪದವಿ ಮುಗಿಸಿರಬೇಕು & ಬಿಎಡ್ ಪದವಿ ಹೊಂದಿರಬೇಕು.

ದಾವಣಗೆರೆ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಹಾಯಕ ಶಿಕ್ಷಕರು ( ಪ್ರಾಥಮಿಕ ಶಾಲೆ):

ಕನಿಷ್ಟ 50% ಅಂಕಗಳೊಂದಿಗೆ (SC, ST, Cat 1 & PWD ಅಭ್ಯರ್ಥಿಗಳಿಗೆ 45%) ಪಿಯುಸಿ ಮುಗಿಸಿರಬೇಕು & ಎರಡು ವರ್ಷಗಳ ಡಿಎಡ್ ಮುಗಿಸಿರಬೇಕು ಹಾಗೂ KARTET ಉತ್ತೀರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ  :

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1250/-

ಪ.ಜಾ/ ಪಪಂ/ ಕೆ1/ ವಿಕಚೇತನ ಅಭ್ಯರ್ಥಿಗಳಿಗೆ : ರೂ. 625/-

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 42 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 18.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 0836-2215349

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-11-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application

Website/ ಜಾಲತಾಣ

 


Click to Share
Bookmark the permalink.

About edutechkannada.com

www.edutechkannada.com Educator

3 Responses to ಕರ್ನಾಟಕ ವಿಶ್ವವಿದ್ಯಾಲಯ ಮಾಧ್ಯಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: KUD School Teacher Recruitment 2023

  1. Pingback: ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ: KSS College SDA Jobs 2023 - edutechkannada.com

  2. Pingback: EMRS ನ 10391 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಬಿಡುಗಡೆ- ಅರ್ಜಿ ಸಲ್ಲಿಸಿದವರು ಈ ಕೆಲ

  3. Kavya R says:

    Good afternoon Sir or Madam
    Required this teacher work

Leave a Reply

Your email address will not be published. Required fields are marked *