NIACL ನಲ್ಲಿ ಖಾಲಿ ಇರುವ 300 ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NIACL Assistant Recruitment 2024
ಕೇಂದ್ರ ಸರ್ಕಾರದ ಒಂದು ಉದ್ಯಮವಾದ ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೋ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 300 ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ
The New India Assurance Co. Ltd ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಪರಿಶಿಷ್ಟ ಜಾತಿ (SC)- 68 |
ಪರಿಶಿಷ್ಟ ಪಂಗಡ (ST) – 43 |
ಇತರೆ ಹಿಂದೂಳಿದ ವರ್ಗ (OBC)- 10 |
ಆರ್ಥಿಕವಾಗಿ ಹಿಂದೂಳಿದವರು (EWS)- 30 |
ಸಾಮಾನ್ಯ ವರ್ಗ (UR)- 149 |
ಒಟ್ಟು ಹುದ್ದೆಗಳು- 300 |
ವೇತನ ಶ್ರೇಣಿ:
The New India Assurance Co. Ltd ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ವೇತನ ರೂ. 37000/- ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ದಿನಾಂಕ 01-01-2024 ಕ್ಕೆ ಸರಿಯಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ವಯೋಮಿತಿ:
ದಿನಾಂಕ 01-01-2024 ಕ್ಕೆ ಸರಿಯಾಗಿ ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 850/- |
SC/ ST/ PWD | 100/- |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು The New India Assurance Co. Ltd ಅಧಿಕೃತ ವೆಬ್ಸೈಟ್ www.newindia.co.in ವೆಬ್ಸೈಟ್ ನಲ್ಲಿ ದಿನಾಂಕ 15-02-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01-02-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-02-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 21-08-2023
ಅಧಿಕೃತ ಲಿಂಕ್/ Official Links:
Pingback: ಸೈನಿಕ ಕಲ್ಯಾಣ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಥಮಿಕ, ಟಿಜಿಟಿ ಶಿಕ್ಷಕರು & ಗ್ರಂಥಾಲಯ ಸಹಾಯಕ ಸೇರಿದಂತೆ
Pingback: ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- PRC RDPR Notification 2024 - EduTech Kannada