ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NICL 274 Jobs Notification 2024
ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತ (NICL) ನಲ್ಲಿ ಖಾಲಿ ಇರುವ ಒಟ್ಟು 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 22-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
NICL ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: National Insurance Corporation Limited
ಹುದ್ದೆಗಳ ಹೆಸರು: Officer Scale I
ಹುದ್ದೆಗಳ ಸಂಖ್ಯೆ: 274
ಕೆಲಸದ ಸ್ಥಳ: Pan India
ವೇತನ/ Salary:
NICL ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ರೂ. 50925-96765 ಮೂಲ ವೇತನ ನಿಗದಿಪಡಿಸಲಾಗಿದೆ. ಇದರ ಜೊತೆಗೆ DA, HRA & ಇತರೆ ಸೌಲಭ್ಯಗಳು ದೊರೆಯತ್ತವೆ.
Educational Qualification/ ವಿದ್ಯಾರ್ಹತೆ :
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ / ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
Age Limit/ ವಯೋಮಿತಿ: (As on 01-12-2023)
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ 30 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿ ಸಡಿಲಿಕೆ
ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 250/-
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/-
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.01.2024 ರಿಂದ 22.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NICL ನ ವೆಬ್ ಸೈಟ್ nationalinsurance.nic.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕದ ಅಣುಶಕ್ತಿ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ TGT & PGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 02.01.2024
ಅರ್ಜಿ ಹಾಕುವ ಕೊನೆಯ ದಿನಾಂಕ: 22.01.2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 22.01.2024
Important Links/ ಪ್ರಮುಖ ಲಿಂಕುಗಳು:
Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್
Pingback: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA YP Recruitment 202