PMBI ನೇಮಕಾತಿ ಅಧಿಸೂಚನೆ ಪ್ರಕಟ: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ- PMBI Recruitment 2023

Click to Share

PMBI ನೇಮಕಾತಿ ಅಧಿಸೂಚನೆ ಪ್ರಕಟ: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ- PMBI Recruitment 2023

ಫಾರ್ಮಾಸ್ಯೂಟಿಕಲ್ & ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ (PMBI) ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 31 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಪೋಸ್ಟ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

KPSC RDWSD & PWD ಇಲಾಖೆಯ ನೇಮಕಾತಿ: AE & JE ಹುದ್ದೆಗಳ ನೇಮಕಾತಿ ಕುರಿತಾದ ಮಹತ್ವದ ಪ್ರಕಟಣೆ

ಫಾರ್ಮಾಸ್ಯೂಟಿಕಲ್ & ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ (PMBI) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಖಾದಿ & ಗ್ರಾಮೋದ್ಯೋಗ ಆಯೋಗದಿಂದ ಅಧಿಸೂಚನೆ ಪ್ರಕಟ| GVY ಯೋಜನೆಯಲ್ಲಿ ಉಚಿತ ತರಬೇತಿ | GVY Training 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಟೆಕ್ನಿಕಲ್ ಅಸಿಸ್ಟೆಂಟ್ (ಮೆಡಿಕಲ್ ಡಿವೈಸಸ್) 01 ಹುದ್ದೆ

ವೇತನ ಶ್ರೇಣಿ:

ಫಾರ್ಮಾಸ್ಯೂಟಿಕಲ್ & ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ (PMBI) ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಬ್ಯಾಚುಲರ್ ಡಿಗ್ರಿ ಇನ್ ಬಯೋ-ಮೆಡಿಕಲ್ ಇಂಜಿನೀಯರಿಂಗ್ ಮುಗಿದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ  4 ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ ಹೇಗಿರುತ್ತೆ?

ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 31-08-2023 ರ ಒಳಗಾಗಿ  CEO, PMBI at E-1 8th Floor, Videocon Tower, Jhandewalan Extn, New Delhi- 110055 ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-08-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ

ನೋಟಿಫಿಕೇಶನ್

Official Website


Click to Share
Bookmark the permalink.

About edutechkannada.com

www.edutechkannada.com Educator