ರಾಜ್ಯದಲ್ಲಿ 20000 ಶಿಕ್ಷಕರ ಹೊಸ ನೇಮಕಾತಿಗೆ ನಿರ್ದಾರ: Primary & High School Teacher Recruitment 2023
ಕರ್ನಾಟಕ ರಾಜ್ಯದ ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ 20000 ಹುದ್ದೆಗಳ ಹೊಸ ನೇಮಕಾತಿಗೆ ರಾಜ್ಯ ಸರ್ಕಾರ ಆಸಕ್ತಿ ತೋರಿಸಿದೆ. ಶಿಕ್ಷಣ ಇಲಾಖೆಯಿಂದ ಇಂತಹ ಒಂದು ಹೊಸ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಮುಂದೆ ಇಡಲು ನಿರ್ದರಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಒಟ್ಟು 53000 ಶಿಕ್ಷಕರ ಹುದ್ದೆಗಳ ಕೊರತೆ ಉಂಟಾಗಿದೆ, ಇದನ್ನು ನೀಗಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಆದರೆ ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ 20000 ಹೊಸ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
13500 ಶಿಕ್ಷಕರ ನೇಮಕಾತಿ ಕೋರ್ಟ್ ನಲ್ಲಿ:
ಈಗ ಹಾಲಿ ನಡೆಯುತ್ತಿರುವ 15000 ಶಿಕ್ಷಕರ ನೇಮಕಾತಿಯಲ್ಲಿ ಸುಮಾರು 13500 ಶಿಕ್ಷಕರು ಆಯ್ಕೆಯಾಗಿದ್ದಾರೆ. ಅವರಿಗೆ ನೇಮಕಾತಿ ಆದೇಶ ನೀಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತದೆ ಎಂದು ಆಯ್ಕೆಯಾದವರು ಸಂಕಟ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವರು ಈಗಾಗಲೇ ವ್ಯಾಜ್ಯದ ವಿಚಾರಣೆ ಅಂತಿಮ ಹಂತಕ್ಕೆ ಬಂದಿದೆ, ಸರ್ಕಾರ ತನ್ನ ವಾದವನ್ನು ಸಮರ್ಥವಾಗಿ ಮಂಡಿಸಿದೆ, ಇನ್ನು ಅಂತಿ ತೀರ್ಪು ಬರುವುದು ಮಾತ್ರ ಬಾಕಿ ಇದೆ, ತೀರ್ಪು ಪ್ರಕಟವಾಗುತ್ತಿದ್ದಂತೆ ಆಯ್ಕೆಗೊಂಡವರಿಗೆ ನಿಯಮಾನುಸಾರ ಆದೇಶ ನೀಡಿ ಶಾಲೆಗಳಿಗೆ ನಿಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನೂ ರಾಜ್ಯದ ಶಿಕ್ಷಕರ ಕೊರತೆಯನ್ನು ನೀಗಿಸಲು 20000 ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರನ್ನು ಮುಂದಿನ ವರ್ಷ ನೇಮಕಾತಿ ಮಾಡಿಕೊಳ್ಳಲಾಗುವುದು ಇದಕ್ಕೆ ಮುಖ್ಯಮಂತ್ರಿಗಳು ಅನುಮೋದನೆಯನ್ನು ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿಕ್ಷಕ ಅಭ್ಯರ್ಥಿಗಳು ತಮ್ಮ ಸಿದ್ದತೆಯನ್ನು ಆರಂಭಿಸಬಹುದು.
Pingback: ಕೃಷಿ ಇಲಾಖೆಯಿಂದ ಒಂದ ಸಾವಿರ AAO ಹುದ್ದೆಗಳ ಭರ್ತಿ: Dept of Agriculture AAO Recruitment 2023 - edutechkannada.com
Pingback: ಏಕಲವ್ಯ ವಸತಿ ಶಾಲೆಗಳಲ್ಲಿ ಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NEST Teacher Recruit