ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR Ombudsman Jobs 2024

Click to Share

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR Ombudsman Jobs 2024

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಮಹತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಖಾಲಿ ಇರುವ ಒಂಬುಡ್ಸ್ ಪರ್ಸನ್  ಹುದ್ದೆಗಳ ತಾತ್ಕಾಲಿಕ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು RDPR ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 05-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ

ಹುದ್ದೆಯ ಹೆಸರು: ಒಂಬುಡ್ಸ್ ಪರ್ಸನ್

ಒಟ್ಟು ಹುದ್ದೆಗಳು : 08       

ಕೆಲಸದ ಸ್ಥಳ: ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ರಾಮನಗರ, ರಾಯಚೂರು & ವಿಜಯನಗರ

ವೇತನ/ Salary:

RDPR ನಿಯಮಾವಳಿಗಳ ಅನ್ವಯ ರೂ. 45000/- ಕ್ರೂಡಿಕೃತ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು: 

ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ & ಸಮಾಜ ಸೇವೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕನಿಷ್ಟ 10 ವರ್ಷ ಸೇವಾನುಭವ ಹೊಂದಿರಬೇಕು

 

ವಯೋಮಿತಿ:

ಗರಿಷ್ಟ 66 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 06.04.2023 ರ ಒಳಗಾಗಿ ತಲುಪುವಂತೆ ಖುದ್ದಾಗಿ ಅಥವಾ ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2024

ಅಧಿಕೃತ ಲಿಂಕ್/ Official Links:

Application Format

Notification

Official Website


Click to Share

1 thought on “ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR Ombudsman Jobs 2024”

  1. Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2050 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Phase XII Exam 2024 - EduTech Kannada

Leave a Comment

Your email address will not be published. Required fields are marked *

Scroll to Top