ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: Revenue SPLOCA Jobs 2024

Click to Share

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: Revenue SPLOCA Jobs 2024

ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಜೂನಿಯರ್ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 12-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ನ್ಯಾಯಾಲಯ ಹಾವೇರಿಯಲ್ಲಿ  ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ: ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ, ಕಂದಾಯ ಇಲಾಖೆ

ಹುದ್ದೆಗಳ ಹೆಸರು: ಜೂನಿಯರ್ ಪ್ರೈವೆಟ್ ಸೆಕ್ರೆಟರಿ

ಹುದ್ದೆಗಳ ಸಂಖ್ಯೆ: 01

ಕೆಲಸದ ಸ್ಥಳ: ಬೆಂಗಳೂರು

ಮಾಸಿಕ ವೇತನ :

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದ ವತಿಯಿಂದ ಮಾಸಿಕ ರೂ. 35000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 12.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/- 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share

Leave a Comment

Your email address will not be published. Required fields are marked *

Scroll to Top