ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ FDAA, ಟೈಪಿಸ್ಟ್ & ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: Revenue SPLOCA Jobs 2025
ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಲೆಕ್ಕ ಸಹಾಯಕ, ಬೆರಳಚ್ಚುಗಾರ ಸೇರಿದಂತೆ ಇತರೆ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 15-01-2025 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಇಲಾಖೆ | ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ, ಕಂದಾಯ ಇಲಾಖೆ |
ಹುದ್ದೆಗಳ ಹೆಸರು | ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ |
ಹುದ್ದೆಗಳ ಸಂಖ್ಯೆ | 05 ಹುದ್ದೆಗಳು |
ಕೆಲಸದ ಸ್ಥಳ | ಕರ್ನಾಟಕ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಥಮ ದರ್ಜೆ ಲೆಕ್ಕ ಸಹಾಯಕ | 01 |
ಕಾನೂನು ಅಧಿಕಾರಿ | 01 |
ಹಣಕಾಸು & ಲೆಕ್ಕಾಧಿಕಾರಿ | 01 |
ಲೀಗಲ್ ಟೈಪಿಸ್ಟ್ | 01 |
ಸ್ಟೆನೋಗ್ರಾಫರ್ | 01 |
ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದ ವತಿಯಿಂದ ಕೆಳಕಂಡಂತೆ ಮಾಸಿಕ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ
ಹುದ್ದೆಗಳ ಹೆಸರು | ವೇತನ |
ಪ್ರಥಮ ದರ್ಜೆ ಲೆಕ್ಕ ಸಹಾಯಕ | 40000/- |
ಕಾನೂನು ಅಧಿಕಾರಿ | 65000-75000 |
ಹಣಕಾಸು & ಲೆಕ್ಕಾಧಿಕಾರಿ | 50000-52000 |
ಲೀಗಲ್ ಟೈಪಿಸ್ಟ್ | 22000-24000 |
ಸ್ಟೆನೋಗ್ರಾಫರ್ | 30000-33000 |
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದಂತೆ ವಿದ್ಯಾರ್ಹತೆ ಹೊಂದಿರಬೇಕು.
ಪ್ರಥಮ ದರ್ಜೆ ಲೆಕ್ಕ ಸಹಾಯಕ: |
ಬಿಕಾಂ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 5 ವರ್ಷಗಳ ಅನುಭವವನ್ನು ಹೊಂದಿರಬೇಕು. |
ಕಾನೂನು ಅಧಿಕಾರಿ: |
LLB, LLM ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಬಾರ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು. |
ಹಣಕಾಸು & ಲೆಕ್ಕಾಧಿಕಾರಿ |
ಎಂಕಾಂ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 5 ವರ್ಷಗಳ ಅನುಭವವನ್ನು ಹೊಂದಿರಬೇಕು. |
ಲೀಗಲ್ ಟೈಪಿಸ್ಟ್ |
LLB ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಬಾರ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು. ಕನ್ನಡ & ಇಂಗ್ಲೀಷ್ ಟೈಪಿಂಗ್ ಗೊತ್ತಿರಬೇಕು. |
ಸ್ಟೆನೋಗ್ರಾಫರ್: |
ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ ಕನ್ನಡ & ಇಂಗ್ಲೀಷ್ ನ ಸ್ಟೆನೋ ಕೋರ್ಸ್ ಆಗಿರಬೇಕು. |
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 15.01.2025 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2025
ಅಧಿಕೃತ ಲಿಂಕ್/ Official Links: |
Notification |