ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Recruitment 2023
ನಮಸ್ತೆ ಸ್ನೇಹಿತರೇ, ಗ್ರಾಮ ಲೆಕ್ಕಿಗ ಹುದ್ದೆಗಳ ಆಕಾಂಕ್ಷಿಗಳಿಗೆ ಶುಭ ಸುದ್ದಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಲೆಕ್ಕಿಗರ ಹುದ್ದೆಗಳ ಬೃಹತ್ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗರ ನೇಮಕಾತಿ ಮಾಡಿಕೊಳ್ಳಲು ಈ ಬಾರಿ ಹೊಸ ನಿಯಮಗಳನ್ನು ರೂಪಿಸಿದೆ. ಇಲ್ಲಿಯವರೆಗೂ ಜಿಲ್ಲಾ ಹಂತದಲ್ಲಿ ನೇಮಕಾತಿ ನಡೆಯುತ್ತಿತ್ತು & ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಲಾಗುತ್ತಿತ್ತು ಆದರೆ ಇನ್ನು ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿಗೆ ವಿಶೇಷ ನಿಯಮಾವಳಿಗಳನ್ನು ರೂಪಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಆಯ್ಕೆ ಪ್ರಾಧಿಕಾರವನ್ನಾಗಿ ನೇಮಿಸಿದೆ.
ಕ್ಯಾಬಿನೆಟ್ ಸಚಿವಾಲಯ ಕಛೇರಿಯಲ್ಲಿ ಖಾಲಿ ಇರುವ 125 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುವುದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಕಂದಾಯ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ರಾಯಚೂರು ಜಿಲ್ಲಾ ಪಂಚಾಯತ್ ನಲ್ಲಿ 22 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕಂದಾಯ ಇಲಾಖೆ |
ಹುದ್ದೆಗಳ ಹೆಸರು: ಗ್ರಾಮ ಲೆಕ್ಕಿಗರು/ Village Accountant |
ಒಟ್ಟು ಹುದ್ದೆಗಳು: 1700 |
ಕೆಲಸದ ಸ್ಥಳ: ಕರ್ನಾಟಕ |
ವೇತನ ಶ್ರೇಣಿ
ಮೂಲವೇತನ ರೂ. 21400-42000
ಮೇಲಿನ ಮೂಲವೇತನದ ಜೊತೆಗೆ ರಾಜ್ಯ ಸರ್ಕಾರದ ನಿಯಮಾವಳಿಗಳ ಅನ್ವಯ DA, HRA & ಇನ್ನಿತರ ಭತ್ಯೆಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಗ್ರಾಮ ಲೆಕ್ಕಿಗರು/ Village Accountant:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ/ 12ನೇ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-
ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ: ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಅರ್ಜಿ ಸಲ್ಲಿಸುವ ವಿಧಾನ:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಯು ಬಹು ಆಯ್ಕೆ ಮಾದರಿಯ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಬರೆಯಬೇಕು.
ಪತ್ರಿಕೆ 1 General Knowledge, Computer Knowledge, Kannada Language & English Language ಕುರಿತ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪ್ರತಿ ವಿಭಾಗಕ್ಕೂ 25 ಅಂಕಗಳನ್ನು ನಿಗದಿಪಡಿಸಲಾಗಿದೆ.
ಪತ್ರಿಕೆ 2 Arithmetic, Statistics, Logical Reasoning & Revenue Law ಎಂಬ 4 ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ತಯಾರಿಸಲಾಗುತ್ತದೆ. ಪ್ರತಿ ವಿಭಾಗಕ್ಕೂ 25 ಅಂಕಗಳು ಇರುತ್ತವೆ.
ಪ್ರಶ್ನೆಪತ್ರಿಕೆಯು ಕನ್ನಡ & ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ತಯಾರಾಗುತ್ತದೆ.
ಅರ್ಜಿ ಸಲ್ಲಿಸುವ ದಿನಾಂಕಗಳು:
ಆನ್ಲೈನ್ ಅರ್ಜಿ ಆರಂಭದ ದಿನಾಂಕ: SOON
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: SOON
Important Links/ ಪ್ರಮುಖ ಲಿಂಕುಗಳು:
Pingback: IIT ಧಾರವಾಡದಲ್ಲಿ ಖಾಲಿ ಇರುವ ಜೂನಿಯರ್ ಫೆಲೋ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 31000/- IIT Dharwad Jobs 2023 - edutechkannada.com
Pingback: ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Government employees cooperative bank recruitment Notific
Pingback: ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KREIS Recruitment 2023 - ed