ಈ ಸಂಸ್ಥೆಯಲ್ಲಿ ಖಾಲಿ ಇರುವ 255 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: ವೇತನ ರೂ. 56000/- ರಿಂದ ಆರಂಭ- RMLH 255 JR Recruitment 2024

Click to Share

ಈ ಸಂಸ್ಥೆಯಲ್ಲಿ ಖಾಲಿ ಇರುವ 255 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: ವೇತನ ರೂ. 56000/- ರಿಂದ ಆರಂಭ- RMLH 255 JR Recruitment 2024

ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ನವದೆಹಲಿ ಅಡಿಯಲ್ಲಿ ಬರುವ RMLH ವತಿಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಿರಿಯ ನಿವಾಸಿ (Junior Resident) ಹುದ್ದೆಗಳ ಭರ್ತಿಗೆ  ಇಚ್ಛೆ ಇರುವ ಅಭ್ಯರ್ಥಿಗಳಿಂದ  ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 05-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Atal Bihari Vajpayee Institute of Medical Sciences , New Delhi ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 33863 ಹುದ್ದೆಗಳ ಭರ್ತಿಗೆ ಕೂಡಲೇ ಅರ್ಜಿ ಸಲ್ಲಿಸಿ

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ನವದೆಹಲಿ

ಹುದ್ದೆಗಳ ಹೆಸರು: ಕಿರಿಯ ನಿವಾಸಿ

ಹುದ್ದೆಗಳ ಸಂಖ್ಯೆ: 255 ಹುದ್ದೆಗಳು

ಕೆಲಸದ ಸ್ಥಳ: ನವದೆಹಲಿ

 

ಹುದ್ದೆಗಳ ಹಂಚಿಕೆ:

ವರ್ಗ/ Category ಖಾಲಿ ಹುದ್ದೆಗಳು
ಸಾಮಾನ್ಯ ವರ್ಗ (GM) 108
ಆರ್ಥಿಕ ಹಿಂದೂಳಿದ ವರ್ಗ (EWS) 24
ಇತರೆ ಹಿಂದೂಳಿದ ವರ್ಗ (OBC) 60
ಪರಿಶಿಷ್ಟ ಜಾತಿ (SC) 43
ಪರಿಶಿಷ್ಟ ಪಂಗಡ (ST) 20
ಒಟ್ಟು ಹುದ್ದೆಗಳು 255

ವೇತನ ಶ್ರೇಣಿ:

ಮೂಲವೇತನ : ರೂ. 56100-177500 (ಮೂಲವೇತನದ ಜೊತೆಗೆ DA, HRA ಇನ್ನಿತರ ಸೌಲಭ್ಯಗಳು ದೊರೆಯಲಿವೆ)

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ಎಂಬಿಬಿಎಸ್ ಪದವಿಯನ್ನು ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಸಾಮಾನ್ಯ & ಓಬಿಸಿ ಮಾತ್ರ: ರೂ. 800/- ಮಾತ್ರ (ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ತುಂಬಲಾಗುತ್ತದೆ)

ಪ.ಜಾ/ ಪ.ಪಂ/ EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.

ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.06.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ-  ವೇತನ ರೂ. 35000/- 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-05-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form


Click to Share
Bookmark the permalink.

About edutechkannada.com

www.edutechkannada.com Educator

2 Responses to ಈ ಸಂಸ್ಥೆಯಲ್ಲಿ ಖಾಲಿ ಇರುವ 255 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: ವೇತನ ರೂ. 56000/- ರಿಂದ ಆರಂಭ- RMLH 255 JR Recruitment 2024

  1. Pingback: ಕರ್ನಾಟಕದಲ್ಲಿರುವ RBI ನ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ 39 ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದ

  2. Pingback: ಕರ್ನಾಟಕ ಜವಳಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| ವೇತನ ರೂ. 46000/- KSIC Silk Jobs 2024 - EduTech Kannada

Leave a Reply

Your email address will not be published. Required fields are marked *