ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5700 ALP ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB ALP Jobs 2024

Click to Share

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5700 ALP ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB ALP Jobs 2024

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5696 ಅಸಿಸ್ಟೆಂಟ್  ಲೋಕೊಪೈಲೆಟ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ರೈಲ್ವೇ ಇಲಾಖೆಯ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಶಿವಮೊಗ್ಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರೈಲ್ವೇ ಇಲಾಖೆಯಲ್ಲಿ   ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರೈಲ್ವೆ ನೇಮಕಾತಿ 202 : ಖಾಲಿ ಹುದ್ದೆಗಳ ವಿವರಗಳು

ಇಲಾಖೆ: ಭಾರತೀಯ ರೈಲ್ವೇ ಇಲಾಖೆ

ಹುದ್ದೆಯ ಹೆಸರು: ಅಸಿಸ್ಟೆಂಟ್ ಲೋಕೊ ಪೈಲೆಟ್

ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದ ಎಲ್ಲ ಕಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿ ಇರುವ ಹುದ್ದೆಗಳ ಸಂಖ್ಯೆ:ಒಟ್ಟು 5696 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ವೇತನ ಶ್ರೇಣಿ:

ರೂ. 19900-68000 (ಈ ವೇತನದ ಜೊತೆಗೆ ಇತರೆ ಸೌಲಭ್ಯಗಳು ದೊರೆಯುತ್ತವೆ)

 

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು & ITI/ Diploma ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಾನ:

ದಿನಾಂಕ 19-02-2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷಗಳು
• ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು

ಆಯ್ಕೆ ವಿಧಾನ:

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಕೆಯ ವಿಧಾನ:

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆ ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ತೆರೆಯಿರಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ, ಇಮೇಲ್ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಒಮ್ಮೆ ಪುನಃ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5:ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕವನ್ನು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ:
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 250/-
• ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಡೆಯುವ ವಿಧಾನ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಜನೆವರಿ  20, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರುವರಿ 18, 2024

 

ನೇಮಕಾತಿ ಕುರಿತಾದ ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಿ/ Apply now

ಅಧಿಸೂಚನೆ/ Notification

ಜಾಲತಾಣ/ Website


Click to Share
Bookmark the permalink.

About edutechkannada.com

www.edutechkannada.com Educator

2 Responses to ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5700 ALP ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB ALP Jobs 2024

  1. Pingback: ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Jobs 2024 - EduTech Kannada

  2. Pingback: ಕರ್ನಾಟಕ ನಗರ ಮೌಲಸೌಕರ್ಯ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KUIDFC Jobs 2024 - EduTech Kannada

Leave a Reply

Your email address will not be published. Required fields are marked *