ಹುಬ್ಬಳ್ಳಿಯ ರೈಲ್ವೇಯಲ್ಲಿ ಹತ್ತನೇ ಮುಗಿದವರಿಗೆ 904 ಹುದ್ದೆಗಳಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿ, ಮೈಸೂರು & ಬೆಂಗಳೂರಿನಲ್ಲಿ ಉದ್ಯೋಗಾವಕಾಶ- RRC Hubli Recruitment 2023
ಭಾರತೀಯ ರೈಲ್ವೇಯ ನೈಋತ್ಯ ವಲಯ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಶಿಶಿಕ್ಷು ತರಬೇತಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ನೈಋತ್ಯ ರೈಲ್ವೇಯ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 08 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ನೈಋತ್ಯ ವಲಯ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಹುಬ್ಬಳ್ಳಿ ವಿಭಾಗ: 237 ಹುದ್ದೆಗಳು |
ಕ್ಯಾರೇಜ್ ರಿಪೇರ್ ವರ್ಕ್ ಶಾಪ್ ಹುಬ್ಬಳ್ಳಿ: 217 ಹುದ್ದೆಗಳು |
ಬೆಂಗಳೂರು ವಿಭಾಗ: 230 ಹುದ್ದೆಗಳು |
ಮೈಸೂರು ವಿಭಾಗ :: 177 ಹುದ್ದೆಗಳು |
ಸೆಂಟ್ರಲ್ ವರ್ಕ್ ಶಾಪ್ ಮೈಸೂರು: 43 ಹುದ್ದೆಗಳು |
ಒಟ್ಟು ಹುದ್ದೆಗಳು: 904 ಹುದ್ದೆಗಳು |
ವೇತನ/ Stipend:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಹತ್ತನೇ ತರಗತಿ & ಐಟಿಐ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತರು ಅರ್ಜಿಗಳನ್ನು ದಿನಾಂಕ 03.07.2023 ರಿಂದ 02.08.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://rrchubli.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-08-2023
Important Links/ ಪ್ರಮುಖ ಲಿಂಕುಗಳು:
Nagaraj
Pingback: Indian Postal 12828 GDS Posts :ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 12828 GDS ಹುದ್ದೆಗಳ ಭರ್ತಿ:- ಇದೀಗ ತಾನೇ ಆಯ್ಕೆ ಪಟ್ಟಿ ಬಿಡುಗಡೆ -