ದಕ್ಷಿಣ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ 4232 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRC SER Recruitment 2025

WhatsApp Group Join Now
Telegram Group Join Now
Click to Share

ದಕ್ಷಿಣ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ 4232 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRC SER Recruitment 2025

ಭಾರತೀಯ ರೈಲ್ವೇಯ ದಕ್ಷಿಣ ಕೇಂದ್ರ ರೈಲ್ವೇಯಲ್ಲಿ  ಖಾಲಿ ಇರುವ ಶಿಶಿಕ್ಷು ತರಬೇತಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ದಕ್ಷಿಣ ಕೇಂದ್ರ ರೈಲ್ವೇಯ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನೆವರಿ 27, 2025 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ದಕ್ಷಿಣ ಕೇಂದ್ರ ರೈಲ್ವೇಯಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ದಕ್ಷಿಣ ಕೇಂದ್ರ ರೈಲ್ವೆ ನೇಮಕಾತಿ 2025 : ಖಾಲಿ ಹುದ್ದೆಗಳ ವಿವರಗಳು

ಇಲಾಖೆ: ದಕ್ಷಿಣ ಕೇಂದ್ರ ರೈಲ್ವೇ

ಹುದ್ದೆಯ ಹೆಸರು: ಅಪ್ರೆಂಟಿಸ್

ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದ ಎಲ್ಲ ಕಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿ ಇರುವ ಹುದ್ದೆಗಳ ಸಂಖ್ಯೆ: ಒಟ್ಟು 4232 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವರ್ಗ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 635
ಪರಿಶಿಷ್ಟ ಪಂಗಡ 317
ಇತರೆ ಹಿಂದೂಳಿದ ವರ್ಗ 1143
EWS 423
ಸಾಮಾನ್ಯ 1714
ಒಟ್ಟು ಹುದ್ದೆಗಳು 4232

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳ ಅಭ್ಯರ್ಥಿಗಳು ಉತ್ತರದ ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಾನ:

ದಿನಾಂಕ 28 ಡಿಸೆಂಬರ್ 2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷಗಳು
• ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು

ಆಯ್ಕೆ ವಿಧಾನ:

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಪ್ರಮುಖ ಮಾಹಿತಿ: ಸೌತ್ ಸೆಂಟ್ರಲ್ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ಮೆಕ್ಯಾನಿಕ್ (ಡಿಸೇಲ್), ಮಶಿನಿಸ್ಟ್, ಕಾರ್ಪೆಂಟರ್, ಪೇಂಟರ್, ಲೈನ್ ಮ್ಯಾನ್ (ಜನರಲ್), ವಯರ್ ಮ್ಯಾನ್, ಇಲೆಕ್ಟ್ರಿಷಿಯನ್, ಎಂಟಿಎಂ, ಟರ್ನರ್, ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ನೇಮಕ. ಹುದ್ದೆಗಳಿಗೆ ಹೆಚ್ಚಿನ ಸೂಚನೆಗಳನ್ನು ನೀಡಲಾಗಿದೆ

ಅರ್ಜಿ ಸಲ್ಲಿಕೆಯ ವಿಧಾನ:

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆ ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ತೆರೆಯಿರಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ, ಇಮೇಲ್ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಒಮ್ಮೆ ಪುನಃ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5:ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕವನ್ನು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ:
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಡೆಯುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

Job News: ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೆಮಲ್ ನಿಂದ ಹೊಸ ಅಧಿಸೂಚನೆ ಪ್ರಕಟ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಡಿಸೆಂಬರ್ 12, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನೆವರಿ 27, 2025

ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ 2025 : ಪ್ರಮುಖ ಲಿಂಕ್‌ಗಳು

 

ಅರ್ಜಿ ಸಲ್ಲಿಸಿ/ Apply now

ಅಧಿಸೂಚನೆ/ Notification

ಜಾಲತಾಣ/ Website


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top