SBI ನಲ್ಲಿ ಖಾಲಿ ಇರುವ 8773 ಕ್ಲರ್ಕ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI JA Recruitment 2023
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ಖಾಲಿ ಇರುವ ಒಟ್ಟು 8773 ಜೂನಿಯರ್ ಅಸೋಸಿಯೇಟ್/ ಕ್ಲರ್ಕ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 07ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
State Bank of India ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗೃಹ ಪಾಲಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪರಿಶಿಷ್ಟ ಜಾತಿ | 1284 |
ಪರಿಶಿಷ್ಟ ಪಂಗಡ | 748 |
OBC | 1919 |
EWS | 817 |
ಸಾಮಾನ್ಯ ವರ್ಗ | 3515 |
Total Posts | 8283 |
ಬ್ಯಾಕ್ ಲಾಗ್ ಹುದ್ದೆಗಳ ಸಂಖ್ಯೆ | 490 |
ವೇತನ ಶ್ರೇಣಿ:
SBI ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 17900-47920 ನಿಗದಿಯಾಗಿದೆ. (ಈ ವೇತನದ ಜೊತೆಗೆ DA, HRA ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)
ಶೈಕ್ಷಣಿಕ ಅರ್ಹತೆಗಳು: (31-12-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು.
ವಯೋಮಿತಿ: (01-04-2023)
ಅಭ್ಯರ್ಥಿಗಳು ಕನಿಷ್ಟ 20 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 750/- |
SC/ ST/ PWD / All Women | Nil |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು SBI ದ ಅಧಿಕೃತ ವೆಬ್ಸೈಟ್ https://bank.sbi/ ವೆಬ್ಸೈಟ್ ನಲ್ಲಿ ದಿನಾಂಕ 07-12-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 17-11-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 07-12-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 07-12-2023
ಅಧಿಕೃತ ಲಿಂಕ್/ Official Links:
Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರ