ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನ: SKES Karnataka Jobs 2024
ಶ್ರೀ ಕಾಳಿದಾಸ್ ಎಜುಕೇಶನ್ ಸೋಸೈಟಿ ಬಾದಮಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 04-05-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಪೋಸ್ಟ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಆಯುಷ್ ಇಲಾಖೆಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಕಾಳಿದಾಸ್ ಡಿಗ್ರಿ ಕಾಲೇಜು, ಬಾದಮಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಆಂಗ್ಲ ಉಪನ್ಯಾಸಕರು-01 |
ಸಮಾಜಶಾಸ್ತ್ರ ಉಪನ್ಯಾಸಕರು- 01 |
ಅರ್ಥಶಾಸ್ತ್ರ ಉಪನ್ಯಾಸಕರು-01 |
ವಾಣಿಜ್ಯಶಾಸ್ತ್ರ ಉಪನ್ಯಾಸಕರು-02 |
ಕ್ಲರ್ಕ್- 02 |
ಒಟ್ಟು ಹುದ್ದೆಗಳು- 07 |
ವೇತನ ಶ್ರೇಣಿ:
ಅಭ್ಯರ್ಥಿಗಳ ಅನುಭವ & ಸಾಮಾರ್ಥ್ಯಗಳ ಅನ್ವಯ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಉಪನ್ಯಾಸಕ ಹುದ್ದೆಗಳು: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂದಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ & ಬಿಎಡ್ ಮುಗಿಸಿರಬೇಕು ಹಾಗೂ KSET/ NET Ph.D ಅರ್ಹತೆಯನ್ನು ಹೊಂದಿರಬೇಕು.
ಕ್ಲರ್ಕ್: ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 04.05.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಶಾಲೆಯ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9740430464, 7353514321, 9902894772
HAL ನಲ್ಲಿ ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-05-2024
Important Links/ ಪ್ರಮುಖ ಲಿಂಕುಗಳು:
Pingback: ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ನಲ್ಲಿ ಖಾಲಿ ಇರುವ ಸಹಾಯಕ & ಕಂಪ್ಯೂಟರ್ ಆಪರೇಟರ್ ನೇಮಕಾತಿ I ಒಟ್ಟ
Pingback: ಕೆಇಎ ಯಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 VAO ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ: Apply fo
Pingback: ಕೇಂದ್ರೀಯ ಆಯುರ್ವೇದಿಕ್ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 60000/- CCRAS Notificatio