ಸಮಾಜ ಕಲ್ಯಾಣ ಇಲಾಖೆಯಿಂದ 100 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ:ಮಾಸಿಕ ರೂ. 25000/- Social Welfare Fellowship Openings 2024
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಪಿಎಚ್ ಡಿ ಓದುತ್ತಿರುವ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ / ಫೆಲೋಷಿಪ್ ಗಾಗಿ ಅರ್ಜಿ ಕರೆಯಲಾಗಿದೆ. 2024-25 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಈ ಫೆಲೋಫಿಪ್ ಗಾಗಿ ಅರ್ಜಿ ಸಲ್ಲಿಸಬಹುದು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು 25-12-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಆಸಕ್ತ & ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆಯಿಂದ ಪಿಎಚ್ ಡಿ ಓದುತ್ತಿರುವ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ / ಫೆಲೋಷಿಪ್ ಕುರಿತಂತೆ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 110000/-
ಇಲಾಖೆ: ಸಮಾಜ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು: ಫೆಲೋಶಿಫ್
ಒಟ್ಟು ಹುದ್ದೆಗಳ ಸಂಖ್ಯೆ: 100
ವಿದ್ಯಾರ್ಹತೆ:
ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಮಾಸಿಕ ಶಿಷ್ಯವೇತನ: ಮಾಸಿಕ ರೂ. 25000/- ಶಿಷ್ಯವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆಗಳು:
- ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು
- ಹಿಂದೂಳಿದ ವರ್ಗಗಳ ಪ್ರವರ್ಗ 1, 2ಎ, 2ಬಿ, 3ಎ & 3ಬಿ ವರ್ಗಕ್ಕೆ ಸೇರಿರಬೇಕು.
- ವಾರ್ಷಿಕ ಆದಾಯ ಮಿತಿ 3.50 ಲಕ್ಷ ಮೀರುವಂತಿಲ್ಲ (ಪ್ರವರ್ಗ 1 ಕ್ಕೆ 4.50 ಲಕ್ಷ)
- ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಟ 55% ಅಂಕಗಳನ್ನು ಗಳಿಸಿರಬೇಕು
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ತಾಲೂಕು ಅಥವಾ ಜಿಲ್ಲಾ ಸಮಾಜ ಕಲ್ಯಾಣ ಕಛೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 25-12-2024 ರ ಒಳಗಾಗಿ ತಾಲೂಕು ಅಥವಾ ಜಿಲ್ಲಾ ಸಮಾಜ ಕಲ್ಯಾಣ ಕಛೇರಿಯ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 25-12-2024