ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Southern Railway Non Technical Jobs 2024
ಭಾರತೀಯ ರೈಲ್ವೇಯ ದಕ್ಷಿಣ ವಲಯದಲ್ಲಿ ಸ್ಕೌಟ್ಸ್ & ಗೈಡ್ಸ್ ಮೀಸಲಾತಿಯಲ್ಲಿ ಖಾಲಿ ಇರುವ ತಾಂತ್ರಿಕ & ತಾಂತ್ರಿಕೇತರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ದಕ್ಷಿಣ ರೈಲ್ವೇಯ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 20, 2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 285 ಗ್ರೂಪ್ ಡಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ: ಇದರ ಕುರಿತಂತೆ ಮಹತ್ವದ ಪ್ರಕಟಣೆ
ಖಾಲಿ ಹುದ್ದೆಗಳ ವಿವರಗಳು
ಇಲಾಖೆ: ಭಾರತೀಯ ರೈಲ್ವೇ ಇಲಾಖೆ, ದಕ್ಷಿಣ ವಲಯ
ಹುದ್ದೆಯ ಹೆಸರು: ತಾಂತ್ರಿಕ & ತಾಂತ್ರಿಕೇತರ ಹುದ್ದೆಗಳು (Level 1 & 2)
ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ದಕ್ಷಿಣ ರೈಲ್ವೇ ವಲಯದ ಎಲ್ಲ ಕಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿ ಇರುವ ಹುದ್ದೆಗಳ ಸಂಖ್ಯೆ: ಒಟ್ಟು 17 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಆಥವಾ ಪಿಯುಸಿ ಅಥವಾ ಐಟಿಐ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು.
ವಯೋಮಾನ:
ದಿನಾಂಕ 01 ಜನೆವರಿ 2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷಗಳು
• ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ:ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ:ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆ ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ತೆರೆಯಿರಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ, ಇಮೇಲ್ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಒಮ್ಮೆ ಪುನಃ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5:ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕವನ್ನು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.
ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಬೋಧಕ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ನಿಗದಿತ ಅರ್ಜಿ ಶುಲ್ಕದ ವಿವರ:
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, EWS, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ –250/-
• ಉಳಿದ ಅಭ್ಯರ್ಥಿಗಳಿಗೆ – ರೂ. 500
ಶುಲ್ಕ ಪಡೆಯುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 20-01-2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 20-02-2024
Pingback: RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Recruitment 2024 - EduTech Kannada
Pingback: ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರ
Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- CFTRI Jobs 2024 - EduTech Kan