ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: UAS Bengaluru Assistant Jobs 2024

Click to Share

ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: UAS Bengaluru Assistant Jobs 2024

ಕರ್ನಾಟಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ವತಿಯಿಂದ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಒಟ್ಟು 20 ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸುವ ಕೊನೆಯ  ದಿನಾಂಕವನ್ನು 10-04-2024 ರವರೆಗೆ ನಿಗದಿಪಡಿಸಲಾಗಿದೆ. ಈ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

UAS Bengaluru ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ಸಂಸ್ಥೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000/- 

ಹುದ್ದೆಗಳ ವಿವರ:

ಹುದ್ದೆಗಳ ಹೆಸರು : ಸಹಾಯಕ/ ಅಸಿಸ್ಟೆಂಟ್

ವರ್ಗ ಹುದ್ದೆಗಳ ಸಂಖ್ಯೆ
ಸಾಮಾನ್ಯ ವರ್ಗ 09
ಪರಿಶಿಷ್ಟ ಜಾತಿ 03
ಪರಿಶಿಷ್ಟ ಪಂಗಡ 02
ಪ್ರವರ್ಗ 1 01
2ಎ 02
2ಬಿ 01
3ಎ 01
3ಬಿ 01
ಒಟ್ಟು ಹುದ್ದೆಗಳು  20

ವೇತನ ಶ್ರೇಣಿ:

ಮೂಲವೇತನ ರೂ. 30350-58250

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ  ಪದವಿ ಮುಗಿಸಿರಬೇಕು. ಕನ್ನಡ  ಓದಲು, ಬರೆಯಲು ಬಲ್ಲವರಾಗಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಸಾಮಾನ್ಯ  ಅಭ್ಯರ್ಥಿಗಳಿಗೆ : ರೂ. 600/-

2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300/-

ಪಜಾ/ ಪಪಂ/ ಮಾಜಿಸೈನಿಕ/ ವಿಕಲಚೇತನ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು Administrative Officer, University of Agricultural Sciences Bengaluru-560065 ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 40 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 03 ವರ್ಷ

ಇತರೆ ಹಿಂದೂಳಿದ ವರ್ಗ: 02 ವರ್ಷ

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 10.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Application Format


Click to Share

3 thoughts on “ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: UAS Bengaluru Assistant Jobs 2024”

  1. Pingback: ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IB Recruitment 2024 - EduTech Kannada

  2. Pingback: ಪ್ರೌಢ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್ & ಜೆಇ ಹುದ್ದೆಗಳ ನೇರ

  3. Pingback: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: IPPB Executive Apply

Leave a Comment

Your email address will not be published. Required fields are marked *

Scroll to Top