ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Yadgiri Recruitment 2024
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ ಜಿಲ್ಲೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಹಾಯಕರು & ಹಣಕಾಸು ಸಾಕ್ಷರ ಪರಿಣಿತರು ಹಾಗೂ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 29-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಆಯುಷ್ ಇಲಾಖೆಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜಿಲ್ಲಾ ಕಾರ್ಯಕ್ರಮ ಸಹಾಯಕರು | 01 |
ಹಣಕಾಸು ಸಾಕ್ಷರ & ಅಕೌಂಟೆಂಟ್ | 01 |
ಡಾಟಾ ಎಂಟ್ರಿ ಆಪರೇಟರ್ & ಅಸಿಸ್ಟೆಂಟ್ | 01 |
ಒಟ್ಟು ಹುದ್ದೆಗಳು | 03 |
ವೇತನ ಶ್ರೇಣಿ:
ಉಪ ನಿರ್ದೇಶಕರು, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಬೀದರ್ ಜಿಲ್ಲೆಯ ವತಿಯಿಂದ ನಿಗದಿಪಡಿಸಿದ ಮಾಸಿಕ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 29.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-02-2024
Important Links/ ಪ್ರಮುಖ ಲಿಂಕುಗಳು:
Pingback: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ: BMTC KE
Pingback: ಕರ್ನಾಟಕದ ಈ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 202 ಗೃಹರಕ್ಷಕ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: U
Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies recruitment 2024 - EduTech K