ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Chitradurga Recruitment 2023

Click to Share

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Chitradurga Recruitment 2023

ಚಿತ್ರದುರ್ಗಾ ಜಿಲ್ಲಾ ಪಂಚಾಯತ್ ನಿಂದ ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳ ಅಡಿಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಚಿತ್ರದುರ್ಗಾ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ  ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 22ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Chitradurga  Walk in 2023

ಚಿತ್ರದುರ್ಗಾ ಜಿಲ್ಲೆಯ  ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್, ಚಿತ್ರದುರ್ಗಾ

ಹುದ್ದೆಗಳ ಹೆಸರು: ಗ್ರಂಥಾಲಯ  & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ

ಹುದ್ದೆಗಳ ಸಂಖ್ಯೆ- 06

ಕೆಲಸದ ಸ್ಥಳ: ಚಿತ್ರದುರ್ಗಾ

ವೇತನ ಶ್ರೇಣಿ/ Salary Scale:

ಆಯ್ಕೆಯಾದವರಿಗೆ ಮಾಸಿಕ ರೂ. 15200/-   ವೇತನ ನೀಡಲಾಗುತ್ತದೆ.

Essential Qualification / ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ತರಬೇತಿಯನ್ನು ಹೊಂದಿರುವ ಪ್ರಮಾಣಪತ್ರ ಪಡೆದಿರಬೇಕು.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಚಿತ್ರದುರ್ಗಾ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 26-12-2023 ರ ಒಳಗಾಗಿ  ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ  ಪೋಸ್ಟ್ ಮುಖಾಂತರ / ಖುದ್ದಾಗಿ ಅರ್ಜಿ ಕಳುಹಿಸಬೇಕು.

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 67700/-

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 06-12-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 26-12-2023

ಪ್ರಮುಖ ಲಿಂಕುಗಳು/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Chitradurga Recruitment 2023

  1. Pingback: ರಾಜ್ಯ ಹಣಕಾಸು ಆಯೋಗದಿಂದ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ- SFC Karnataka Recruitment 2023 - EduTech

  2. Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 203 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ

Leave a Reply

Your email address will not be published. Required fields are marked *