ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Vijayanagar Recruitment 2024
ವಿಜಯನಗರ ಜಿಲ್ಲಾ ಪಂಚಾಯತ್ ನಿಂದ ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳ ಅಡಿಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ವಿಜಯನಗರ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ 22 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು 08-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಸಿಟಿ ಕಾರ್ಪೊರೇಶನ್ ನಲ್ಲಿ ಖಾಲಿ ಇರುವ 134 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಹಾಕಿ
ವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್, ವಿಜಯನಗರ
ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಹುದ್ದೆಗಳ ಸಂಖ್ಯೆ- 22
ಕೆಲಸದ ಸ್ಥಳ: ವಿಜಯನಗರ
ವೇತನ ಶ್ರೇಣಿ/ Salary Scale:
ಆಯ್ಕೆಯಾದವರಿಗೆ ಮಾಸಿಕ ರೂ. 15200/- ವೇತನ ನೀಡಲಾಗುತ್ತದೆ.
Essential Qualification / ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ತರಬೇತಿಯನ್ನು ಹೊಂದಿರುವ ಪ್ರಮಾಣಪತ್ರ ಪಡೆದಿರಬೇಕು.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ವಿಜಯನಗರ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 08-01-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ / ಖುದ್ದಾಗಿ ಅರ್ಜಿ ಕಳುಹಿಸಬೇಕು.
ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-12-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 08-01-2024
ಪ್ರಮುಖ ಲಿಂಕುಗಳು/ Official Links:
ಅರ್ಜಿ ನಮೂನೆ/ Application format
Pingback: ಕೇಂದ್ರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂ